Jeremiah 46:18 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂದೇಶವು ರಾಜನಿಂದ ಘಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಘಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.
Kannada Bible (KNCL) BSI 2016
ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.