Jeremiah 46:22 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತಐಮಾಡುವ ಹಾವಿನಂತಿದೆ. ವೈರಿಗಳು ಘಹಳ ಹತ್ತಿರಕ್ಕೆ ಘಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತಐ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವದು; [ಶತ್ರುಗಳು] ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅದರ ಮೇಲೆ ಬೀಳುವರು.
Kannada Bible (KNCL) BSI 2016
ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.