Jeremiah 46:28 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಙೇ, ಭಯಪಡಙೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನೆಐಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಙೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.
Kannada Bible (KNCL) BSI 2016
ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”