Jeremiah 46:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
Kannada BSI Bible 2016
ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಬರ್ಜಿಗಳನ್ನು ಬೆಳಗಿರಿ, ಕವಚ ತೊಟ್ಟುಕೊಳ್ಳಿರಿ.
Kannada Bible (KNCL) BSI 2016
ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಹುತರೇ, ಕುದುರೆಗಳನ್ನು ಕಟ್ಟಿರಿ; ವಾಹನಾಶ್ವಗಳನ್ನು ಹತ್ತಿರಿ. ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಂತುಕೊಳ್ಳಿರಿ; ಈಟಿಗಳನ್ನು ಮೆರುಗು ಮಾಡಿರಿ; ಕವಚಗಳನ್ನು ತೊಟ್ಟುಕೊಳ್ಳಿರಿ.