Jeremiah 47:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಘಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನೆಐಲ್ಲ ನಾಶಮಾಡುವ ಕಾಲ ಘಂದಿದೆ. ಯೆಹೋವನು ಘಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
Kannada BSI Bible 2016
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
Kannada Bible (KNCL) BSI 2016
ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.