Jeremiah 47:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಙೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಊಸಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
Kannada BSI Bible 2016
ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ.
Kannada Bible (KNCL) BSI 2016
ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”