Jeremiah 48:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ಹೀಗೆಂದನು: “ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿಸುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.
Kannada BSI Bible 2016
ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ದಿನಗಳು ಬರಲಿವೆ. ಆಗ ನಾನು ‘ಹೊಯ್ಯತಕ್ಕವರನ್ನು’ ಅವರ ಬಳಿಗೆ ಕಳುಹಿಸುವೆನು. ಅವರು ಅದನ್ನು ಹೊಯ್ದುಬಿಡುವರು. ಪಾತ್ರೆಗಳನ್ನು ಬರಿದುಮಾಡುವರು. ಗಡಿಗೆಗಳನ್ನು ಒಡೆದುಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಗೋ, ದಿನಗಳು ಬರುವವು” ಎಂದು ಯೆಹೋವ ದೇವರು ಅನ್ನುತ್ತಾರೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು; ಅದರ ಪಾತ್ರೆಗಳನ್ನು ಬರಿದುಮಾಡಿ, ತಮ್ಮ ಬುದ್ದಲಿಗಳನ್ನು ಒಡೆಯುವರು.