Jeremiah 48:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಙೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಙ್ ಸಹ ಅದೇ ಸ್ಥಿತಿಯಲ್ಲಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.
Kannada BSI Bible 2016
ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.
Kannada Bible (KNCL) BSI 2016
ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.