Jeremiah 48:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಙ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.
Kannada BSI Bible 2016
ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ; ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ ಎಂದು ಪ್ರಲಾಪಿಸಿರಿ.
Kannada Bible (KNCL) BSI 2016
ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಅರಿತವರೇ, ನೀವೆಲ್ಲರು ಅದಕ್ಕಾಗಿ ಎದೆಬಡಿದುಕೊಳ್ಳಿ! ‘ಅಯ್ಯೋ, ಶಕ್ತಿಯುತ ಚೆಂಗೋಲು, ಮಹಿಮೆಯ ದಂಡಕೋಲು ಮುರಿದುಹೋಯಿತಲ್ಲಾ!’ ಎಂದು ಪ್ರಲಾಪಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ, ‘ಬಲವಾದ ಕೋಲೂ, ಮಹಿಮೆಯ ಬೆತ್ತವೂ ಹೇಗೆ ಮುರಿದುಹೋಯಿತು?’ ಎಂದು ಹೇಳಿರಿ.