Jeremiah 48:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
Kannada BSI Bible 2016
ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುವತಿಯೇ, ದೀಬೋನ್‍ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕೂತುಕೋ! ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
Kannada Bible (KNCL) BSI 2016
ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.