Jeremiah 48:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಮುಂದೆ ಮೋವಾಙ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಘನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
Kannada BSI Bible 2016
ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು.
Kannada Bible (KNCL) BSI 2016
ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.