Jeremiah 48:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾನು ಯೆಹೋವನಿಗಿಂತ ಘಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಘನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಘನ್ನು ತಮಾಷೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
Kannada BSI Bible 2016
ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.
Kannada Bible (KNCL) BSI 2016
“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.