Jeremiah 48:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಘಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಘಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”
Kannada BSI Bible 2016
ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಡಂಭ, ಅಹಂಕಾರ, ಸ್ವಾಭಿಮಾನ ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.
Kannada Bible (KNCL) BSI 2016
ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೋವಾಬಿನ ಹೆಮ್ಮೆಯನ್ನು ಕುರಿತು, ಅದರ ಮಹಾ ಗರ್ವವನ್ನು ಕುರಿತು, ಅದರ ಡಂಭವನ್ನೂ, ಅಹಂಕಾರವನ್ನೂ, ಬಡಾಯಿಯನ್ನೂ, ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.