Jeremiah 48:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
Kannada BSI Bible 2016
ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ಮೋವಾಬಿನ ನಿವಿುತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವದು.
Kannada Bible (KNCL) BSI 2016
ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು.