Jeremiah 48:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
Kannada BSI Bible 2016
ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
Kannada Bible (KNCL) BSI 2016
ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.