Jeremiah 48:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಹೆಷ್ಬೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಬರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಬತ್ತಿಹೋಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
Kannada BSI Bible 2016
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
Kannada Bible (KNCL) BSI 2016
ಹೆಷ್ಬೋನಿನ ಮತ್ತು ಎಲೆಯಾಲೆಯ ಜನರು ಅರಚಿಕೊಳ್ಳುತ್ತಿದ್ದಾರೆ. ಆ ಕೂಗು ಯಹಚಿನವರೆಗೆ ಕೇಳಿಸುತ್ತಿದೆ. ಚೋಯರಿನಿಂದ ಹೊರೊನಯಿಮಿನವರೆಗೆ ಮತ್ತು ಎಗ್ಲತ್ ಶೆಲೆಶೀಯದವರೆಗೆ ಆ ಕಿರಿಚಾಟ ಕೇಳಿಸುತ್ತಿದೆ. ನಿಮ್ರೀಮ್ ಹಳ್ಳವೂ ಹಾಳಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, ಯಹಚಿನವರೆಗೂ, ಚೋಗರ್ ಮೊದಲ್ಗೊಂಡು ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು.