Jeremiah 48:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
Kannada BSI Bible 2016
ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
Kannada Bible (KNCL) BSI 2016
ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.