Jeremiah 48:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಘನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.
Kannada BSI Bible 2016
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.