Jeremiah 48:44 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಘಂದರೆ ಅವರನ್ನು ಘಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
Kannada BSI JV (ಕನ್ನಡ ಸತ್ಯವೇದವು J.V. (BSI))
ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.
Kannada Bible (KNCL) BSI 2016
ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.