Jeremiah 48:47 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಘ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಘಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.
Kannada Bible (KNCL) BSI 2016
ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು.