Jeremiah 48:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
Kannada BSI Bible 2016
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಕೆಲಸಗಳಲ್ಲಿಯೂ ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
Kannada Bible (KNCL) BSI 2016
“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.