Jeremiah 49:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸಬಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಙೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಙೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಙೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
Kannada BSI Bible 2016
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.
Kannada Bible (KNCL) BSI 2016
ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.