Jeremiah 49:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
Kannada BSI Bible 2016
ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ - ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳಿರಿ.
Kannada Bible (KNCL) BSI 2016
“ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”