Jeremiah 49:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎದೋಮನ್ನು ನಾಶಮಾಡಲಾಗುವುದು. ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
Kannada BSI Bible 2016
ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎದೋಮು ಬೆರಗಿಗೆ ಆಸ್ಪದವಾಗುವದು; ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
Kannada Bible (KNCL) BSI 2016
“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.