Jeremiah 49:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಙ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಙ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
Kannada BSI Bible 2016
ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.
Kannada Bible (KNCL) BSI 2016
ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.