Jeremiah 49:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎದೋಮ್ಯರಿಗೆ ಯೆಹೋವನು ಮಾಡಙೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
Kannada BSI Bible 2016
ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನು ಎದೋವಿುನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವದು.
Kannada Bible (KNCL) BSI 2016
ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.