Jeremiah 49:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
Kannada BSI Bible 2016
ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು, ಅವರ ಪರದೆಗಳನ್ನೂ, ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ಸುತ್ತುಮುತ್ತಲು ದಿಗಿಲು ಎಂಬದಾಗಿ ಅವರ ಕಡೆಗೆ ಕೂಗುವರು.
Kannada Bible (KNCL) BSI 2016
ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.