Jeremiah 49:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನ್ನು ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಘೂಕದೆಐಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನ್ನು ಸೋಲಿಸಲು ಒಳ್ಳೆಯ ಸಂಚನ್ನು ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
Kannada BSI Bible 2016
ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶನಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.