Jeremiah 49:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
Kannada BSI Bible 2016
ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
Kannada Bible (KNCL) BSI 2016
ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.