Jeremiah 49:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.
Kannada Bible (KNCL) BSI 2016
ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.