Jeremiah 49:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ಆಕಾಶದ ನಾಲ್ಕು ಮೂಲೆಗಳಿಂದ ಬರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನ್ನು ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
Kannada BSI Bible 2016
ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರು ಸೇರದೆ ಇರುವ ರಾಜ್ಯವೇ ಇರದು.
Kannada Bible (KNCL) BSI 2016
ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.