Jeremiah 49:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಙೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಘಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನೆಐಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
Kannada BSI Bible 2016
ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಾಮ್ಯರು ತಮ್ಮ ಪ್ರಾಣ ಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
Kannada Bible (KNCL) BSI 2016
ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.