Jeremiah 49:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಿನ್ನ ಘಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಘಲವನ್ನು ಕಳೆದುಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
Kannada BSI Bible 2016
ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮೇಲೆ ಯಾರು ತಾನೆ ಬಿದ್ದಾರು ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸವಿಟ್ಟಿರುವ ಭ್ರಷ್ಟದೇಶವೇ, ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು ಏಕೆ ಕೊಚ್ಚಿಕೊಳ್ಳುತ್ತೀ?
Kannada Bible (KNCL) BSI 2016
“ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?