Jeremiah 49:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
Kannada BSI Bible 2016
ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದರಿದವರನ್ನು ಕೂಡಿಸುವದಕ್ಕೆ ಯಾರೂ ಇಲ್ಲವಾಗುವದು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.