Jeremiah 49:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
Kannada BSI Bible 2016
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
Kannada Bible (KNCL) BSI 2016
ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?