Jeremiah 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
Kannada BSI Bible 2016
ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆಹೋವನನ್ನು ಅಲ್ಲಗಳೆದು - ಆತನು ಏನು ಮಾಡಿಯಾನು? ನಮಗೆ ಕೇಡುಬಾರದು, ಖಡ್ಗವೂ ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
Kannada Bible (KNCL) BSI 2016
ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,