Jeremiah 5:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
Kannada BSI Bible 2016
ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು.
Kannada Bible (KNCL) BSI 2016
ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”