Jeremiah 5:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಘಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.
Kannada BSI Bible 2016
ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.
Kannada Bible (KNCL) BSI 2016
‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’