Jeremiah 5:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನಗೆ ಅಂಜುವುದಿಲ್ಲವೇ?”‘ ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಙೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಘಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಘಹುದು, ಆದರೆ ದಡವನ್ನು ದಾಟಿಹೋಗಲಾರವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
Kannada Bible (KNCL) BSI 2016
ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.