Jeremiah 5:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಘಲೆಯನ್ನು ಮಾಡುವ ಘಲೆಗಾರರಂತಿದ್ದಾರೆ. ಅವರು ಘಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನೆಐ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
Kannada BSI Bible 2016
ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚುವ ಹಾಗೆ ಹೊಂಚುಹಾಕುತ್ತಾರೆ; ಬೋನೊಡ್ಡಿ ಮನುಷ್ಯರನ್ನು ಹಿಡಿಯುತ್ತಾರೆ.
Kannada Bible (KNCL) BSI 2016
“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.