Jeremiah 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
Kannada BSI Bible 2016
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.
Kannada Bible (KNCL) BSI 2016
ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.