Jeremiah 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಙೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
Kannada BSI Bible 2016
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.