Jeremiah 50:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗ ನಿನ್ನ ತಾಯಿಯು ಘಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
Kannada BSI Bible 2016
ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.
Kannada Bible (KNCL) BSI 2016
ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.