Jeremiah 50:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
Kannada BSI Bible 2016
ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು.
Kannada Bible (KNCL) BSI 2016
ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”