Jeremiah 50:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನೆಐಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಙೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
Kannada BSI Bible 2016
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
Kannada Bible (KNCL) BSI 2016
“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’