Jeremiah 50:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
Kannada BSI Bible 2016
ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್‍ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
Kannada Bible (KNCL) BSI 2016
ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!