Jeremiah 50:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಙೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಙೇಕಾದ ಕಾರ್ಯವೊಂದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
Kannada BSI Bible 2016
ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.