Jeremiah 50:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
Kannada BSI Bible 2016
ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದ ಕಟ್ಟಕಡೆಯಿಂದ ಬಾಬೆಲಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
Kannada Bible (KNCL) BSI 2016
ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.