Jeremiah 50:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಙೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
Kannada BSI Bible 2016
ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.
Kannada Bible (KNCL) BSI 2016
“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.