Jeremiah 50:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಘಂದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
Kannada BSI Bible 2016
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.